ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಾಗುತ್ತೆ ಅನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ರಾಜ್ಯದಲ್ಲಿ ಲಾಕ್ ಡೌನ್ ಆದೇಶ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ, ಜನರು ಸಹಜ ಜೀವನ ನಡೆಸುವಂತಾಗಬೇಕು. ಲಾಕ್ ಡೌನ್ ಆದ್ರೆ ಆರ್ಥಿಕ ಚೇತರಿಕೆ ಅಸಾಧ್ಯ. ಈ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗಿನ ವಿಡಿಯೋ ಕಾನ್ಪರೆನ್ಸ್ ನಲ್ಲಿ ಇನ್ನಷ್ಟು ವಿನಾಯಿತಿ ನೀಡುವಂತೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಹೇರಿಕೆ ಮಾಡುವ ಅವಶ್ಯಕತೆಯಿಲ್ಲ. ಈ ನಿಟ್ಟಿನಲ್ಲಿ ಪ್ರಧಾನಿ ಅವರಿಗೆ ಮನವರಿಕೆ ಮಾಡಿಕೊಡುವುದಾಗಿಯೂ ಯಡಿಯೂರಪ್ಪ ಹೇಳಿದ್ದಾರೆ.