3ನೇ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಬಿಎಸ್ ವೈ: ಮೆಕ್ಕೆಜೋಳ ಬೆಳೆಗಾರರು, ಆಶಾಕಾರ್ಯಕರ್ತರಿಗೆ ನೆರವು

0

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮೆಕ್ಕೆಜೋಳ ಬೆಳೆಗಾರರು ಹಾಗೂ ಕೊರೊನಾ ವಿರುದ್ದ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರ್ಜರಿ ಆಫರ್ ನೀಡಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರಕಾರ ಈಗಾಗಲೇ 2 ಹಂತದಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆಕ್ಕೆಜೋಳ ಬೆಳೆಗಾರರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಪ್ಯಾಕೇಜ್ ನೀಡಿದ್ದಾರೆ.

ಮೆಕ್ಕೆಜೋಳ ಬೆಳೆಗಾರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಬೆಳೆಗಾರರಿಗೆ ತಲಾ 5,000 ರೂಪಾಯಿ ನೆರವು ಘೋಷಣೆಯನ್ನು ಮಾಡಿದ್ದು, ರಾಜ್ಯದ ಸುಮಾರು 10 ಲಕ್ಷ ಮೆಕ್ಕೆಜೋಳ ಬೆಳೆಗಾರರಿಗೆ ಈ ಸೌಲಭ್ಯ ಲಭ್ಯವಾಗಲಿದೆ.

ಇನ್ನು ಕೊರೊನಾ ಸೋಂಕಿನ ವಿರುದ್ದ ಹೋರಾಟ ನಡೆಸುತ್ತಿದರುವ ಆಶಾ ಕಾರ್ಯಕರ್ತರಿಗೆ ನೆರವಾಗುವ ನಿಟ್ಟಿನಲ್ಲಿ ತಲಾ 3,000 ರೂಪಾಯಿಯ ಪ್ರೋತ್ಸಾಹಧನವನ್ನು ಘೋಷಣೆ ಮಾಡಿದೆ. ಇದರಿಂದಾಗಿ 40,240 ಮಂದಿ ಆಶಾಕಾರ್ಯಕರ್ತರಿಗೆ ಸಹಾಯವಾಗಲಿದೆ.

Leave A Reply

Your email address will not be published.