ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ : ಕರಾವಳಿಯಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಣೆ

0

ಬೆಂಗಳೂರು : ಕರಾವಳಿಯಲ್ಲಿ ಸುರಿದ ಐತಿಹಾಸಿಕ ಮಳೆಯ ಬೆನ್ನಲ್ಲೇ ಮತ್ತೆ ಮೂರು ದಿನಗಳ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳು ಕಳೆದ ನಾಲ್ಕೈದು ದಿನಗಳ ಕಾಲ ಸುರಿದ ಮಳೆಯಿಂದ ತತ್ತರಿಸಿ ಹೋಗಿವೆ. ಉಡುಪಿಯಲ್ಲಿ ಇದೇ ಮೊದಲ ಬಾರಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಆವಾಂತರವನ್ನೇ ಸೃಷ್ಟಿಸಿತ್ತು. ಈ ನಡುವಲ್ಲೇ ರಾಜ್ಯದಲ್ಲಿ ಸೆಪ್ಟೆಂಬರ್ 24ರ ವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಕರಾವಳಿ ಭಾಗದಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ರೆ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಪಶ್ಚಿಮಘಟ್ಟ ಹಾಗೂ ಮಲೆನಾಡಿ ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿರುವುದರಿಂದಾಗಿ ಜಲಾಶಯಗಳಲ್ಲಿನ ನೀರಿನ ಮಟ್ಟ ಕೂಡ ಹೆಚ್ಚಳವಾಗಿದೆ.

ಇಂದಿನಿಂದ ಸೆ. 24ರವರೆಗೆ ಕರಾವಳಿ, ಶಿವಮೊಗ್ಗ, ಹಾಸನ, ಕೊಡಗು, ಯಾದಗಿರಿ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ​ ಘೋಷಿಸಲಾಗಿದೆ.

Leave A Reply

Your email address will not be published.