NEWS NEXT BIG IMPACT : ಕರ್ನಾಟಕವೇ ಲಾಕ್ ಡೌನ್ : ಸರಕಾರದಿಂದ ಚಿಂತನೆ

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡುವ ಕುರಿತು ಸಂಜೆಯ ವೇಳೆಗೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತಜ್ಞವೈದ್ಯರು ನೀಡಿದ ವರದಿಯನ್ನು ಆಧರಿಸಿ ಕ್ರಮಕೈಗೊಳ್ಳಲಾಗುತ್ತಿದೆ. ಕೊರೊನಾ ಸೊಂಕಿತರ ಸಂಪರ್ಕದಲ್ಲಿರುವ ಪತ್ತೆ ಹಚ್ಚಿ ಕೊರಂಟೈನ್ ನಲ್ಲಿ ಇಡುವುದು ಸವಾಲಿನ ಕೆಲಸವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಜನರು ಮನೆಯಲ್ಲಿಯೇ ಇರುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಮಾರ್ಚ್ 31ರ ವರೆಗೆ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ಕುರಿತು ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದೆ. ನಿನ್ನೆ ರಾಜ್ಯ ಸರಕಾರ ಕೊರೊನಾ ವೈರಸ್ ದೃಢಪಟ್ಟಿರುವ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಗಳೂರು, ಬೆಳಗಾವಿ, ಮೈಸೂರು, ಧಾರವಾಡ, ಚಿಕ್ಕಬಳ್ಳಾಪುರ, ಕಲಬುರಗಿ, ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಹೊರಡಿಸಿತ್ತು. ಆದರೆ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಿದ್ರೆ ಮಾತ್ರ ಕೊರೊನಾ ವೈರಸ್ ಹರಡದಂತೆ ತಡೆಯಲು ಸಾಧ್ಯವೆನ್ನುವ ಒತ್ತಡ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನ್ಯೂಸ್ ನೆಕ್ಟ್ಸ್ ಕೂಡ ವರದಿ ಪ್ರಸಾರ ಮಾಡಿತ್ತು. ಇದೀಗ ರಾಜ್ಯ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಬಡವರಿಗೆ ಹಸಿವು ನೀಗಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟಿನ್ ಗಳಲ್ಲಿ ಉಚಿತವಾಗಿ ಊಟ ಒದಗಿಸಲಾಗುವುದು. ಕೊರೊನಾ ಸೋಂಕಿತರಿಗಾಗಿ 30 ವಿಶೇಷ ಕ್ಲಿನಿಕ್ ಆರಂಭಿಸಲಾಗುವುದು. ಖಾಸಗಿ ಆಸ್ಪತ್ರೆಗೆ ಸಹಕಾರದೊಂದಿಗೆ ಕೊರೊನಾ ತಡೆಗೆ ಸರಕಾರ ಬದ್ದವಾಗಿದೆ. ಕೊರೊನಾ ಸೋಂಕಿತರ ಕಣ್ಗಾವಲಿಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದರು.

Leave A Reply

Your email address will not be published.