ಕೇರಳ : ಈ ಹಿಂದೆ ಅಡುಗೆ ತಯಾರಿಕರ ಯೂಟ್ಯೂಬ್ ಚಾನೆಲ್ ನಲ್ಲಿ ಕಾಣಿಸಿಕೊಂಡು ಸಾಕಷ್ಟು ಸುದ್ದಿ ಮಾಡಿದ್ದ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಇದೀಗ ಮೀನುಗಾರರ ಜೊತೆಗೆ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳುವ ಮೂಲಕ ಸುದ್ದಿಯಲ್ಲಿದ್ದಾರೆ.

ಕೇರಳ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಪಕ್ಷ ಸಂಘಟನೆಗೆ ಹೆಚ್ಚಿನ ಆಧ್ಯತೆಯನ್ನು ನೀಡುವ ನಿಟ್ಟಿನಲ್ಲಿ ಕೇರಳಕ್ಕೆ ಬಂದಿದ್ದು, ಇಂದು ಬೆಳ್ಳಂಬೆಳಗ್ಗೆಯೇ ಮೀನುಗಾರರ ಜೊತೆಗೆ ದೋಣಿಯಲ್ಲಿ ತೆರಳಿ ಮೀನುಗಾರಿಕೆಯನ್ನು ನಡೆಸಿದ್ದಾರೆ. ಮೀನುಗಾರಿಕಾ ಬಲೆ ಎಳೆಯುತ್ತಿರುವ ದೃಶ್ಯ ಇದೀಗ ವೈರಲ್ ಆಗಿದ್ದು, ಈ ಕುರಿತು ಎನ್ ಐಎ ಸುದ್ದಿ ಸಂಸ್ಥೆ ಈ ಕುರಿತು ಮಾಹಿತಿಯನ್ನು ನೀಡಿದೆ.
ಸದಾ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಲ್ಲಿರುವ ರಾಹುಲ್ ಗಾಂಧಿ ಇದೀಗ ಮೀನುಗಾರರ ಜೊತೆಗೆ ಮೀನುಗಾರಿಕೆಗೆ ತೆರಳಿರೋದನ್ನು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಯುವರಾಜ ಸರಳತೆಯನ್ನು ಕೊಂಡಾಡುತ್ತಿದ್ದಾರೆ