ಬ್ರಹ್ಮಾವರ : ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವ ಸಾವನ್ನಪ್ಪಿರುವ ಘಟನ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಲುವಳ್ಳಿಯಲ್ಲಿ ನಡೆದಿದೆ.
ಕೃಷ್ಣ ಮರಕಾಲ (60 ವರ್ಷ) ಎಂಬವರೇ ಸಾವನ್ನಪ್ಪಿದ ದುರ್ದೈವಿ. ಬ್ರಹ್ಮಾವರದಿಂದ ಹೆಬ್ರಿಯ ಕಡೆಗೆ ಚಲಿಸುತ್ತಿದ್ದ ಕಂಟೈನರ್ ಲಾರಿ ಚಲಿಸುತ್ತಿತ್ತು. ಚಾಲಕ ಅತೀ ವೇಗ ಹಾಗೂ ಅಜಾಗರೂಕತೆ ಯಿಂದ ಕಂಟೈನರ್ ಚಲಾಯಿಸುತ್ತಿದ್ದು, ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೃಷ್ಣ ಮರಕಾಲರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕೃಷ್ಣ ಮರಕಾಲ ಅವರು ರಸ್ತೆ ಬದಿಯ ಚರಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದ್ರೂ, ಅವರು ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ತೀವ್ರತೆಗೆ ಕಂಟೈನರ್ ಲಾರಿ ಪಲ್ಟಿಯಾಗಿ ಪಕ್ಕದಲ್ಲಿರುವ ಗದ್ದೆಗೆ ಉರುಳಿ ಬಿದ್ದಿದೆ. ಲಾರಿ ಚಾಲಕ ಅಬೂಬಕ್ಕರ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.