ಮಂಗಳೂರು : ಗೋಡೆಯ ಮೇಲೆ ಉಗ್ರರ ಪರ ಬರಹಗಳನ್ನು ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರದಲ್ಲಿ ನವೆಂಬರ್ 27ರಂದು ಬಿಜೈನ ಅಪಾರ್ಟ್ ಮೆಂಟ್ ವೊಂದರ ಗೋಡೆಯ ಮೇಲೆ ಹಾಗೂ ನಗರ ಕೋರ್ಟ್ ರಸ್ತೆಯ ಆವರಣದ ಗೋಡೆಯ ಮೇಲೆ ವಿವಾದಾತ್ಮಕ ಬರಹಗಳನ್ನು ಬರೆಯಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ನಗರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ನಜೀರ್ ಮೊಹಮ್ಮದ್ ಎಂಬಾತನನ್ನು ಬಂಧಿಸಲಾಗಿದೆ.
ಮೊಬೈಲ್ ಕರೆಗಳ ದಾಖಲೆಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆಯಿದೆ.