ಭಟ್ಕಳ : ಕೊರೊನಾ ಮಹಾಮಾರಿ ಕರಾವಳಿಯಲ್ಲಿ ಅಟ್ಟಹಾಸವನ್ನು ಮೆರೆಯುತ್ತಿದೆ. ಭಟ್ಕಳದಲ್ಲಿ ಒಂದೇ ದಿನ ಮೂರು ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.

ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪತ್ತೆಯಾದ ನಂತರ ವೃದ್ದೆ ಹಾಗೂ ಯುವತಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ದುಬೈನಿಂದ ಬಂದಿದ್ದ ಮೂವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

ಇದೀಗ ಭಟ್ಕಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಕರಾವಳಿ ಭಾಗದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಕರಾವಳಿಗರು ಆತಂಕಕ್ಕೆ ಒಳಗಾಗಿದ್ದು, ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ.