ರಾಜ್ಯದಲ್ಲಿ ಕೊರೊನಾ ಸ್ಪೋಟ : 10 ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸ್ಪೋಟ ಸಂಭವಿಸಿದೆ. ಇದೇ ಮೊದಲ ಬಾರಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿದಾಟಿದ್ದು, ಸಿಲಿಕಾನ್ ಸಿಟಿಯಲ್ಲೇ 7,584 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ‌ ಎರಡನೇ ಅಲೆಯ ಅಬ್ಬರ ಜೋರಾಗಿದೆ. ದಿನೇ ದಿನೇ ಸೋಂಕಿತ ರ ಸಂಖ್ಯೆಯಲ್ಲಿ ಏರಿಕೆಯಾಗು ತ್ತಿದೆ. ಇಂದು 7, 584‌‌ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,81,982 ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯನ್ನು ಕಂಡಿದ್ದು, 51,236ಕ್ಕೆ ಏರಿಕೆಯಾಗಿದೆ.

ಇನ್ನು ‌ರಾಜ್ಯದ ಕಲಬುರಗಿ, ಬೀದರ್ ಹಾಗೂ ಮೈಸೂರಿನಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಲಬುರಗಿ 291, ಬೀದರ್ 290 ಹಾಗೂ ಮೈಸೂರಿನಲ್ಲಿ 277 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Comments are closed.