ಉಡುಪಿ : ಕೊರೊನಾ ಮಹಾಮಾರಿ ಅಟ್ಟಹಾಸವನ್ನು ಮೆರೆದಿದೆ. ಮುಂಬೈ ವೈರಸ್ ಸ್ಪೋಟಕ್ಕೆ ಕೃಷ್ಣನಗರಿ ಬೆಚ್ಚಿಬಿದ್ದಿದೆ. ಉಡುಪಿಯಲ್ಲಿಂದು ಒಂದೇ ದಿನ ಬರೋಬ್ಬರಿ 150 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಕೊರೊನಾ ಪೀಡಿತರ ಸಂಖ್ಯೆ 410ಕ್ಕೆ ಏರಿಕೆಯಾಗಿದೆ.

ಕಳೆದೊಂದು ವಾರದಿಂದಲೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದೆ. ನಿನ್ನೆ 73 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ, ಇಂದು ಬರೋಬ್ಬರಿ 150 ಮಂದಿಗೆ ಸೋಂಕು ಕಾಣಿಸಿಕೊಂಡು ಆತಂಕವನ್ನು ಮೂಡಿಸಿದೆ. ಉಡುಪಿಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಪ್ರಕರಣ ದಾಖಲಾಗಿದೆ.
