ಕಾಂಗ್ರೆಸ್ ಶಾಸಕಿಗೆ ಕೊರೋನಾ ಸೋಂಕು….! ಖಾಸಗಿ ಆಸ್ಪತ್ರೆಗೆ ದಾಖಲಾದ ಸೌಮ್ಯರೆಡ್ಡಿ…!!

ಜಯನಗರ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸೌಮ್ಯ ರೆಡ್ಡಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜ್ವರ,ಉಸಿರಾಟದ ತೊಂದರೆ ಸೇರಿದಂತೆ ಹಲವು ಸಮಸ್ಯೆಯಿಂದ ಬಳಲುತ್ತಿದ್ದ ಸೌಮ್ಯ ರೆಡ್ಡಿಯವರು  ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, ರಿಸಲ್ಟ್ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಟ್ವೀಟ್ ನಲ್ಲಿ ಮಾಹಿತಿ ನೀಡಿರೋ ಶಾಸಕಿ, ನನಗೆ ಕೊರೋನಾ ಸೋಂಕು ತಗುಲಿದೆ. ಆದರೆ ರೋಗಲಕ್ಷಣಗಳು ಅಷ್ಟು ತೀವ್ರವಾಗಿಲ್ಲ. ಆದರೆ ನನಗೆ ಅಸ್ತಮಾ ಇದೆ. ಹೀಗಾಗಿ ಪೋಷಕರು ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದಿದ್ದಾರೆ.

ಕ್ಷೇತ್ರದಲ್ಲಿ ಏನಾದ್ರೂ ಸಮಸ್ಯೆಗಳಿದ್ದರೇ ಸಧ್ಯಕ್ಕೆ ನನ್ನ ಕಚೇರಿಯನ್ನು ಸಂಪರ್ಕಿಸಿ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೌಮ್ಯ ರೆಡ್ಡಿ ಮನವಿ ಮಾಡಿದ್ದಾರೆ.

ಕೊರೋನಾ ಎರಡನೇ ಅಲೆ ತೀವ್ರವಾಗುತ್ತಿದ್ದು, ಜನರು ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಸೇರಿದಂತೆ ಎಲ್ಲ ಅಗತ್ಯ ನಿಯಮ ಪಾಲಿಸಿ. ಸರ್ಕಾರವೂ ಕೂಡ ಜನರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು. ಜನರು ಆರೋಗ್ಯಕ್ಕೆ ,ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ.

Comments are closed.