ರಾಜ್ಯದಲ್ಲಿಂದು 10 ಹೊಸ ಕೊರೊನಾ ಕೇಸ್ : 3 ರಿಂದ 13ನೇ ಸ್ಥಾನಕ್ಕೆ ಕುಸಿದ ಕರ್ನಾಟಕ

0

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಇಂದು ಒಂದೇ ದಿನ 10 ಮಂದಿ ತುತ್ತಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ 191ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಇಂದು ಬಾಗಲಕೋಟೆಯಲ್ಲಿ ಮೂವರು ಮಕ್ಕಳಿಗೆ ಕೊರೊನಾ ಸೋಂಕು ಕಾಣಸಿಕೊಂಡಿದ್ರೆ, ಬೆಂಗಳೂರಲ್ಲಿ ತಬ್ಲಿಕಿ ಜಮಾತ್ ಗೆ ತೆರಳಿದ್ದ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ನಂಜಗೂಡಿನ ಜುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕರಿಗೆ, ಮಂಡ್ಯದಲ್ಲಿಯೂ ಜಮಾತ್ ಗೆ ತೆರಳಿದ್ದ ಓರ್ವನಿಗೆ ಕೊರೊನಾ ಸೋಂಕು ತಗುಲಿದೆ. ಮೈಸೂರು 1 ಹಾಗೂ ಚಿಕ್ಕಬಳ್ಳಾಪುರದಲ್ಲಿ 48 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.

ಕೊರೊನಾ ಸೋಂಕಿಗೆ ದೇಶದಲ್ಲಿಯೇ ಮೊದಲ ಸಾವು ಸಂಭವಿಸಿದ್ದು, ಆರಂಭದಲ್ಲಿ ರಾಜ್ಯ ಕೊರೊನಾ ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿತ್ತು. ಆದರೆ ಇದೀಗ ಕೊರೊನಾ ವಿರುದ್ದ ಕಟ್ಟುನಿಟ್ಟಾಗಿ ಲಾಕ್ ಡೌನ್ ಆದೇಶ ಪಾಲನೆ ಮಾಡಿರೋ ಹಿನ್ನೆಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಕುಸಿತವಾಗುತ್ತಿದ್ದು, ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಕರ್ನಾಟಕ ಇದೀಗ 13ನೇ ಸ್ಥಾನಕ್ಕೆ ಕುಸಿದಿದೆ.

Leave A Reply

Your email address will not be published.