ರಾಜ್ಯದ 7 ಜಿಲ್ಲೆಗಳಲ್ಲಿ ಕೊರೊನಾ ಕಟ್ಟೆಚ್ಚರ : ಆರೋಗ್ಯ ಸಚಿವರು ಕೊಟ್ಟ ಖಡಕ್ ವಾರ್ನಿಂಗ್ ಏನು ಗೊತ್ತಾ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಗಡಿಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಹುಬ್ಬಳ್ಳಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳನ್ನು ಡೇಂಜರ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ.

ಹೊಸ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಮಾರ್ಚ್ ಅಂತ್ಯದ ವರೆಗೂ ಎಲ್ಲರೂ ಕೊರೊನಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ಉಡುಪಿ, ಮೈಸೂರು, ಹುಬ್ಬಳ್ಳಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದಿದ್ದಾರೆ.

Comments are closed.