ಕಿಲ್ಲರ್ ಕೊರೊನಾಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ !

0

ಬೆಂಗಳೂರಿನ ಅಗ್ರಹಾರ ದಾಸರಹಳ್ಳಿ ನಿವಾಸಿಯಾಗಿದ್ದ 61 ವರ್ಷದ ವೃದ್ಧೆಯೊಬ್ಬರು ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಕೆಲ ದಿನಗಳ ಹಿಂದಷ್ಟೇ ದಾಖಲಾಗಿದ್ದರು. ಈ ವೇಳೆ ಮಹಿಳೆಯಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಸೋಂಕಿಗೆ ಒಟ್ಟಾರೆ 13 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದ್ದು, ಈ ವರೆಗೂ 1968 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಇನ್ನೂ 3184 ಮಂದಿ ಸೋಂಕಿನಿಂದ ಬಳಲುತ್ತಿದ್ದು, ನಿಗಧಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave A Reply

Your email address will not be published.