ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 49 ವರ್ಷದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಡೆಡ್ಲಿ ಹೆಮ್ಮಾರಿ ನಿತ್ಯವೂ ಬಲಿ ಪಡೆಯುತ್ತಿರುವುದು ಕರಾವಳಿಗರನ್ನು ಆತಂಕಕ್ಕೀಡು ಮಾಡಿದೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕ ನಿವಾಸಿಯಾಗಿರುವ 49 ವರ್ಷ ವ್ಯಕ್ತಿ ಕಳೆದ 20 ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ, ಟಿಬಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಆದ್ರೀಗ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.