ದ.ಕ.ದಲ್ಲಿಂದು ಕೊರೊನಾಗೆ ಇಬ್ಬರು ಬಲಿ : ಕರಾವಳಿಯಲ್ಲಿ ಕೊರೊನಾ ಮರಣ ಮೃದಂಗ

0

ಮಂಗಳೂರು : ಕೊರೊನಾ ಮಹಾಮಾರಿ ಕರಾವಳಿಯಲ್ಲಿ ಮರಣ ಮೃದಂಗವನ್ನು ಬಾರಿಸುತ್ತಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಸಂತೋಷ್ ನಗರದ ನಿವಾಸಿ 52 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆ. ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರದಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನು ಕೊರೊನಾ ಸೋಂಕಿಗೆ ತುತ್ತಾಗಿದ್ದ ಉಳ್ಳಾಲದ 54 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದಲೂ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ಅದ್ರಲ್ಲೂ ಕಳೆದೊಂದು ವಾರದಲ್ಲೇ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಿದೆ. ನಿನ್ನೆ ಒಂದೇ ದಿನ 147 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಜಿಲ್ಲೆಯಲ್ಲಿ ಒಟ್ಟು 1,234 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 663 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಅಲ್ಲದೇ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಸೋಂಕು ಬರೋಬ್ಬರಿ 24 ಮಂದಿಯನ್ನು ಬಲಿ ಪಡೆದಿದ್ದು, ಕರಾವಳಿಗರಲ್ಲಿ ಕೊರೊನಾ ಆತಂಕವನ್ನು ಮೂಡಿಸದಿಎ.

Leave A Reply

Your email address will not be published.