ಉಡುಪಿ : ಕೊರೊನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಮುಂಬೈನಿಂದ ಕುಂದಾಪುರಕ್ಕೆ ಆಗಮಿಸಿದ್ದ ಜಪ್ತಿಯ ನಿವಾಸಿ 54 ವರ್ಷ ವ್ಯಕ್ತಿ ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮಾರ್ಚ್ 13 ರಂದು ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯನ್ನು ಕುಂದಾಪುರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ವ್ಯಕ್ತಿಗೆ ಕ್ವಾರಂಟೈನ್ ಮಾಡಲಾಗಿತ್ತು. ವ್ಯಕ್ತಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಎದೆನೋವಿನ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೆ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇದೀಗ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ವ್ಯಕ್ತಿ ಕೊರೊನಾ ಸೋಂಕಿನಿಂದಲೇ ಸಾವನ್ನಪ್ಪಿರುವುದು ದೃಢಪಟ್ಟಿದೆ. ಈ ಕುರಿತು ಮಣಿಪಾಲ ಕೆಎಂಸಿ ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.