ಬೆಂಗಳೂರು: ನಿನ್ನೆ ದಿಢೀರ್ ದಾಳಿ ನಡೆಸುವ ಮೂಲಕ ಡಿಕೆ ಬ್ರದರ್ಸ್ ಗೆ ಶಾಕ್ ನೀಡಿದ್ದ ಸಿಬಿಐಗೆ ಇಂದು ಡಿ.ಕೆ.ಸುರೇಶ್ ಗೆ ಶಾಕ್ ನೀಡಿದ್ದು, ತಮಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಸಿಬಿಐ ಅಧಿಕಾರಿಗಳು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ತಮಗೆ ಕೊರೋನಾ ಸೋಂಕು ತಗುಲಿರುವ ಸಂಗತಿಯನ್ನು ಟ್ವೀಟ್ ಮಾಡಿರುವ ಸಂಸದ ಡಿ.ಕೆ.ಸುರೇಶ್, ಇತ್ತೀಚಿಗೆ ತಮ್ಮ ಸಂಪರ್ಕಕ್ಕೆ ಬಂದ ಸಿಬಿಐ ಅಧಿಕಾರಿಗಳು, ಮಾಧ್ಯಮಮಿತ್ರರು ಕೂಡ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಕೊವೀಡ್-19 ಪರೀಕ್ಷೆಯಲ್ಲಿ ನನಗೆ ಸೋಂಕು ಧೃಡಪಟ್ಟಿದೆ. ನಾನು ಸುರಕ್ಷಿತವಾಗಿದ್ದೇನೆ. ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿಎಂದಿದ್ದು, ಇದರಿಂದ ನಿನ್ನೆಯಷ್ಟೇ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಡಿ.ಕೆ.ಸುರೇಶ್ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಕೆಲದಿನಗಳ ಹಿಂದೆಯಷ್ಟೇ ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿ.ಕೆ.ಸುರೇಶ್ ಸಹೋದರ ಡಿಕೆಶಿ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದು, ನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು.