ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮಾರ್ಚ್ 31ರ ವರೆಗೂ ಕರ್ನಾಟಕ ಬಂದ್ ಆಗಲಿದ್ದು, ಶಾಲಾ, ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ. ಅಲ್ಲದೇ ಪಂಚಾಯತ್, ಸ್ಥಳಿಯ ಸಂಸ್ಥೆಗಳು ಹಾಗೂ ನಗರ ಪಾಲಿಕೆ ಚುನಾವಣೆಗಳನ್ನು ಮುಂದೂಡಲಾಗಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಮಾರ್ಚ್ 14ರಿಂದಲೇ ಮಾಲ್, ಪಬ್, ಥಿಯೇಟರ್ ಬಂದ್ ಮಾಡಿತ್ತು. ಅಲ್ಲದೇ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದ್ರೆ ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಬಂದ್ ನ್ನು ಮಾರ್ಚ್ 31ರ ವರೆಗೂ ಮುಂದುವರಿಸಲಾಗಿದೆ.

ಸಾರ್ವಜನಿಕ, ಸಭೆ ಸಮಾರಂಭ, ಮದುವೆಗೆ ನಿರ್ಬಂಧ ಮುಂದುವರಿಸಲಾಗಿದೆ. ಇನ್ನು ಕೊರೊನಾ ನಿಯಂತ್ರಣಕ್ಕಾಗಿ 4 ಸಚಿವರ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ರಾಜ್ಯ ಸರಕಾರ 200 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಇನ್ನು ಬೆಂಗಳೂರನ್ನು ಲಾಕ್ ಡೌನ್ ಮಾಡಬೇಕೆಂಬ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದರೂ ಕೂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲಾಕ್ ಡೌನ್ ಮಾಡೋದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಇನ್ನೊಂದು ವಾರ ಕಾದುನೋಡೋಣಾ ಆಮೆಲೆ ತೀರ್ಮಾನ ಕೈಗೋಣ ಅಂತಾ ಯಡಿಯೂರಪ್ಪ ಹೇಳಿದ್ದಾರೆ.