ಮಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರದಿಂದ ಸಂಪೂರ್ಣ ಲಾಕ್ ಡೌನ್ ಆಚರಣೆಯಿಲ್ಲ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಅಗತ್ಯ ಸಾಮಗ್ರಿಗಳು ಜನರಿಗೆ ಲಭ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದಂತೆಯೇ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ಲಾಕ್ ಡೌನ್ ಆಚರಿಸಲಾಗಿತ್ತು. ಮಂಗಳವಾದ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿತ್ತು. ಹೀಗಾಗಿ ಜನರು ಅಗತ್ಯ ವಸ್ತುಗಳ ಖರೀದಿಯಿಂದ ವಿನಾಯಿತಿಯನ್ನು ನೀಡಲಾಗಿತ್ತು. ಇದೀಗ ಬುಧವಾರದಿಂದ ಸಂಪೂರ್ಣ ಲಾಕ್ ಡೌನ್ ನಿಂದ ವಿನಾಯಿತಿಯನ್ನು ನೀಡಲಾಗುತ್ತಿದೆ. ಹೀಗಾಗಿ ಅಗತ್ಯ ಸೇವೆಗಳಾದ ವೈದ್ಯಕೀಯ ಸೇವೆ, ಆಸ್ಪತ್ರೆ, ಮೆಡಿಕಲ್, ಹಾಲು, ದಿನಸಿ ಸಾಮಗ್ರಿ, ಬ್ಯಾಂಕಿಂಗ್ ಸೇವೆ ಎಂದಿನಂತೆಯೇ ಇರಲಿದೆ. ಗ್ರಾಹಕರು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಖರೀದಿಗೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದಿದ್ದಾರೆ.