ಉಡುಪಿ : ಕೊರೊನಾ ಶಂಕಿತ 68 ವರ್ಷದ ಮಹಿಳೆಯೋರ್ವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಶಂಕಿತ ಮಹಿಳೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಅಚಾಪುರದವರು ಎಂದು ತಿಳಿದು ಬಂದಿದೆ.

ಕಳೆದ ವಾರ ಮೆಕ್ಕಾಗೆ ತೆರಳಿದ್ದ ಮಹಿಳೆಗೆ ಜ್ವರ ಮತ್ತು ಉಸಿರಾಟದ ಸಮಸ್ಯೆ ಕಂಡುಬಂದಿತ್ತು. ಸೌದಿಯಲ್ಲಿ ಚಿಕಿತ್ಸೆಯನ್ನು ಪಡೆದು ಶಿವಮೊಗ್ಗಕ್ಕೆ ಮರಳಿದ್ದರು. ಆದರೆ ಶಿವಮೊಗ್ಗಕ್ಕೆ ಬಂದ ನಂತರದಲ್ಲಿ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿರೋ ಹಿನ್ನೆಲೆಯಲ್ಲಿ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಮಣಿಪಾಲಕ್ಕೆ ಕರೆತರಲಾಗಿದೆ.

ಈಗಾಗಲೇ ಮಹಿಳೆಯ ಕಫದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಕ್ಕೆ ಕಳುಹಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.