ಮಂಗಳೂರು : ವಿಶ್ವವನ್ನೇ ತಲ್ಲಣ ಮೂಡಿಸಿರೋ ಕೊರೊನಾ ಮಹಾಮಾರಿ ಇದೀಗ ಕರಾವಳಿಗೂ ಕಾಲಿಟ್ಟಿದೆ. ಮಂಗಳೂರಿನಲ್ಲಿ ವ್ಯಕ್ತಿಯೋರ್ವರಿಗೆ ಕೊರೊನಾ ಇರೋದು ದೃಢಪಟ್ಟಿದೆ. ಭಟ್ಕಳ ಮೂಲದ 22 ವರ್ಷದ ವ್ಯಕ್ತಿಗೆ ಕೊರೊನಾ ಇರೋದನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಖಚಿತ ಪಡಿಸಿದ್ದಾರೆ.

ಮಾರ್ಚ್ 19ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವ್ಯಕ್ತಿಯನ್ನು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಕಾರ್ಯ ನಡೆಸುವ ವೇಳೆಯಲ್ಲಿ ಶಂಕಿತ ಕೊರೊನಾ ಪತ್ತೆಯಾಗಿತ್ತು. ಹೀಗಾಗಿ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು.

ಇದೀಗ ಆರೋಗ್ಯ ತಪಾಸಣಾ ವರದಿಯಲ್ಲಿ ವ್ಯಕ್ತಿಗೆ ಕೊರೊನಾ ಸೋಂಕು ಇರೋದು ಪತ್ತೆಯಾಗಿದೆ. ಹೀಗಾಗಿ ಕೊರೊನಾ ಪೀಡಿತ ಪ್ರಯಾಣಿಸಿದ್ದ ವಿಮಾನದಲ್ಲಿ 165 ಮಂದಿ ಪ್ರಯಾಣಿಸಿದ್ದರು. ಇದೀಗ ಅಷ್ಟೂ ಜನರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಕೊರೊನಾ ಸೋಂಕು ಹರಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಳ್ಳಲಾಗುತ್ತಿದೆ.