ನವದೆಹಲಿ : ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಂದು 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಯಲಿದೆ.
ಇಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಭೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ ಸೇರಿದಂತೆ 10 ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಕೊರೊನಾ ಸೋಂಕು ಹೆಚ್ಚಳವಾಗಿರುವ ರಾಜ್ಯಗಳ ಸ್ಥಿತಿಗತಿ ಅವಲೋಕನ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಾಥ್ ನೀಡಲಿದ್ದಾರೆ.
