ಕರುನಾಡಲ್ಲಿ ಕೊರೊನಾ ರಣಕೇಕೆ : 4,120 ಮಂದಿಗೆ ಕೊರೊನಾ ಸೋಂಕು, 91 ಮಂದಿ ಬಲಿ

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ 60 ಸಾವಿರದ ಗಡಿದಾಟಿದ್ದು, ಬರೋಬ್ಬರಿ 667 ಮಂದಿಯನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ.

ಲಾಕ್ ಡೌನ್ ಹೇರಿಕೆ ಮಾಡಿದ್ರೂ ಕೂಡ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿಂದು 4,120 ಮಂದಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 63,777ಕ್ಕೆ ಏರಿಕೆಯಾಗಿದ್ರೆ ಇಂದು ಒಂದೇ ದಿನ 91 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 39,379 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರವಾಗಿ ಏರಿಕೆಯಾಗುತ್ತಿದೆ. ಇಂದು ಕೂಡ ಬೆಂಗಳೂರಲ್ಲಿ 2,156 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಕ್ಯೆ 31,777ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಲ್ಲಿ 253 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರೂ ಕೂಡ 24,316 ಮಂದಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕೊರೊನಾ ಸೋಂಕು ತೀವ್ರವಾಗಿ ಏರುತ್ತಿರುವುದು ಆತಂಕವನ್ನು ಮೂಡಿಸಿದೆ.

Leave A Reply

Your email address will not be published.