ಶಾಲಾ, ಕಾಲೇಜು ಸಂಪೂರ್ಣ ಬಂದ್ : ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ : ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನು ಬಂದ್ ಮಾಡಿ ಆದೇಶಿಸಲಾಗಿದ್ದು, ಸೋಂಕಿನ ನಿಯಂತ್ರಣಕ್ಕೆ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ರಾತ್ರಿ ಕರ್ಪ್ಯೂ ಅವಧಿಯನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಣೆ ಮಾಡಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.  


ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸುದ್ದಿಗೋಷ್ಟಿಯಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದ್ದಾರೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ನೈಟ್ ಕರ್ಪ್ಯೂ ಅವಧಿಯಲ್ಲಿ ವಿಸ್ತರಣೆ ಮಾಡಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಅಲ್ಲದೇ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ.

ಕೊರೊನಾ ವೈರಸ್ ಸೋಂಕು ಹರಡುವಿಕೆಯ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೈಕ್ಷಣಿಕ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದೆ. ಪಾರ್ಕ್, ಜಿಮ್ ಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಆದೇಶಿಸಲಾಗಿದೆ.

Comments are closed.