ಮಂಗಳೂರಿನಲ್ಲಿ ಶಂಕಿತ ಕೊರೊನಾ ಪತ್ತೆ : ದುಬೈನಿಂದ ಬಂದಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲು

0

ಮಂಗಳೂರು : ದುಬೈನಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯೋರ್ವರಿಗೆ ಶಂಕಿತ ಕೊರೊನಾ ಇರೋದು ಪತ್ತೆಯಾಗಿದೆ.

ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಿದ ವೇಳೆಯಲ್ಲಿ ಶಂಕಿತ ಕೊರೊನಾ ಪತ್ತೆಯಾಗಿತ್ತು. ಇದೀಗ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಐಸೋಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ವ್ಯಕ್ತಿಯ ರಕ್ತದ ಮಾದರಿ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಸಂಗ್ರಹಿಸಿ ಬೆಂಗಳೂರಿಗೆ ಕಳುಹಿಸಲಾಗಿದೆ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವೇಳೆಯಲ್ಲಿ ವ್ಯಕ್ತಿಯನ್ನು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿತ್ತು. ಆದ್ರೆ ಈ ವೇಳೆ ಕೊರೊನಾ ಪತ್ತೆಯಾಗಿರಲಿಲ್ಲ. ಇದೀಗ ಮಂಗಳೂರಿನಲ್ಲಿ ನಡೆಸಿದ ಸ್ಕ್ರೀನಿಂಗ್ ನಲ್ಲಿ ಕೊರೊನಾ ಇರೋದು ಪತ್ತೆಯಾಗಿದೆ.

Leave A Reply

Your email address will not be published.