ಕೊರೊನಾ ಎಫೆಕ್ಟ್ : ಮಾಸ್ಕ್ ಧರಿಸದೇ ಹೊರಬಂದರೆ ಅರೆಸ್ಟ್ !

0

ಮುಂಬೈ : ದೇಶದಾದ್ಯಂತ ಕೊರೊನಾ ಮಹಾಮಾರಿ ಆರ್ಭಟ ಮುಂದುವರಿದಿದೆ. ಅದ್ರಲ್ಲೂ ಮಹಾರಾಷ್ಟ್ರದಲ್ಲಂತೂ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಮಾಸ್ಕ ಧರಿಸೋದನ್ನು ಕಡ್ಡಾಯಗೊಳಿಸಲಾಗಿದ್ದು, ಮಾಸ್ಕ್ ಧರಿಸದೆ ಮನೆಯಿಂದ ಹೊರಬಂದ್ರೆ ಅರೆಸ್ಟ್ ಮಾಡುವುದಾಗಿ ಮುಂಬೈ ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.

ಮಹಾರಾಷ್ಟ್ರ ದೇಶದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅದ್ರಲ್ಲೂ 2 ಕೋಟಿಗೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ಮುಂಬೈ ಮಹಾನಗರದಲ್ಲಿ ಈಗಾಗಲೇ 782 ಕೊರೊನಾ ಸೋಂಕಿಗೆ ತುತ್ತಾಗಿದ್ದು, 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಮುಂಬೈನಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರೋ ಬೆನ್ನಲ್ಲೇ ಮಾಸ್ಕ್ ಧರಿಸುವುದನ್ನು ಮುಂಬೈನಲ್ಲಿ ಕಡ್ಡಾಯಗೊಳಿಸಲಾಗುತ್ತಿದೆ.

ಜನರು ಮನೆಯಿಂದ ದಿನ ದಿನತ್ಯದ ವಸ್ತುಗಳನ್ನು ಕೊಳ್ಳಲು ಹೋಗುವಾಗಲೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಲ್ಲದೇ ಇನ್ನಿತರ ಯಾವುದೇ ವಿಚಾರದ ಹಿನ್ನೆಲೆಯಲ್ಲಿ ಮನೆಯಿಂದ ಹೊರಬಂದ್ರೆ ಮಾಸ್ಕ ಹಾಕಲೇ ಬೇಕು. ಒಂದೊಮ್ಮೆ ಮಾಸ್ಕ್ ಧರಿಸದೇ ಇದ್ರೆ ಅಂತವನ್ನು ಬಂಧಿಸಲಾಗುವುದು ಎಂದು ಮುಂಬೈ ಮಹಾನಗರ ಪಾಲಿಕೆಯ ಆಯುಕ್ತ ಪ್ರವೀಣ್ ಪರದೇಶಿ ಆದೇಶಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ಕೂಡ ಕೊರೊನಾ ಸೋಂಕು ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಇನ್ನೊಂದೆಡೆ ಮಹಾರಾಷ್ಟ್ರ ಸರಕಾರ ಕೂಡ ಕಠಿಣ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿದೆ.

ಮಾತ್ರವಲ್ಲ ಮುಂಬೈನಲ್ಲಿ ಕೊರೊನಾ ಸೋಂಕು ಈಗಾಗಲೇ ಮೂರನೇ ಹಂತಕ್ಕೆ ಕಾಲಿರಿಸಿದೆ ಅನ್ನೋ ಆತಂಕವೂ ಇದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದೀಗ ಮಾಸ್ಕ್ ನ್ನು ಕಡ್ಡಾಯಗೊಳಿಸಲಾಗುತ್ತಿದೆ.

Leave A Reply

Your email address will not be published.