
ಬೆಂಗಳೂರು : ಕೊರೊನಾ ಸೋಂಕಿನ ತುತ್ತಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಎರಡೆರಡು ಬಾರಿ ಕೊರೊನಾ ತಪಾಸಣೆ ನಡೆಸಲಾಗಿದ್ದು, ಎರಡೂ ವರದಿಯಲ್ಲಿಯೂ ನೆಗೆಟಿವ್ ವರದಿ ಬಂದಿದೆ . ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಮೂತ್ರಪಿಂಡದ ಸಮಸ್ಯೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆಯಲ್ಲಿ ನಡೆಸಿದ ವರದಿಯಲ್ಲಿ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಈ ಹೀಗಾಗಿ ಅವರಿಗೆ ಕೊರೊನಾ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಈ ನಡುವಲ್ಲೇ ಸಿದ್ದರಾಮಯ್ಯ ಅವರನ್ನು ನೋಡಿಕೊಳ್ಳುತ್ತಿದ್ದ ಪುತ್ರ ಶಾಸಕ ಯತೀಂದ್ರ ಅವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಕೊರೊನಾ ತಪಾಸಣಾ ವರದಿಯಲ್ಲಿಯೂ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಲಾಗಿದೆ.

ಆಸ್ಪತ್ರೆಯಿಂದ ಹೊರಡುವ ವೇಳೆಯಲ್ಲಿ ಆಸ್ಪತ್ರೆ ಸಿಬ್ಬಂದಿಗಳು ಸಿದ್ದರಾಮಯ್ಯ ಅವರಿಗೆ ಹೂಗುಚ್ಚಗಳನ್ನು ನೀಡಿ ಬೀಳ್ಕೊಟ್ಟಿದ್ದಾರೆ. ಈ ವೇಳೆಯಲ್ಲಿ ಸಿದ್ದರಾಮಯ್ಯ ಅವರು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಜೊತೆಗೆ ಪುತ್ರ ಶಾಸಕ ಡಾ.ಯತೀಂದ್ರ ಅವರು ಕೂಡ ಗುಣಮುಖರಾಗಿದ್ದಾರೆ.

ಯತೀಂದ್ರ ಅವರ ಕೊರೊನಾ ತಪಾಸಣಾ ವರದಿಯೂ ಕೂಡ ನೆಗೆಟಿವ್ ಬಂದಿದ್ದು, ಅವರನ್ನು ಕೂಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ತಂದೆಯನ್ನು ಕರೆದುಕೊಂಡು ಪುತ್ರ ಮನೆಗೆ ಆಗಮಿಸಿದ್ದಾರೆ.

ಸಿದ್ದರಾಮಯ್ಯ ಅವರು ಗುಣಮುಖರಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಶಾಸಕ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರೊಂದಿಗೆ ಮನೆಗೆ ತೆರಳಿದ್ದಾರೆ.

ವೈದ್ಯರ ಸಲಹೆಯ ಮೇರೆಗೆ ಸಿದ್ದರಾಮಯ್ಯ ಅವರು ಒಂದು ವಾರಗಳ ಕಾಲ ಮನೆಯಲ್ಲಿಯೇ ವಿಶ್ರಾಂತಿಯನ್ನು ಪಡೆಯಲಿದ್ದಾರೆ. ಇದೇ ವೇಳೆ ಗುಣಮುಖರಾಗುವಂತೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ.