ಮಂಗಳೂರು ವೆನ್ಲಾಕ್ ಆಸ್ಪತ್ರೆಯಿಂದ 4 ಮಂದಿ ಕೊರೊನಾ ಸೋಂಕಿತರು ಡಿಸ್ಚಾರ್ಜ್

0

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆದ್ರೆ ಈ ನಡುವಲ್ಲೇ ಜನರಿಗೆ ನೆಮ್ಮದಿ ನೀಡುವ ಸುದ್ದಿಯೊಂದು ಹೊರಬಿದ್ದಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ 4 ಮಂದಿ ಕೊರೊನಾ ಸೋಂಕಿತರು ಗುಣಮುಖವಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ದುಬೈನಿಂದ ಮಾರ್ಚ್ 19ರಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಬಂದಿದ್ದ ಭಟ್ಕಳ ಮೂಲದ ವ್ಯಕ್ತಿಗೆ ಜ್ವರ ಕಾಣಿಸಿಕೊಂಡಿತ್ತು. ಸ್ಕ್ರೀನಿಂಗ್ ವೇಳೆಯಲ್ಲಿ ಶಂಕಿತ ಕೊರೊನಾ ಪತ್ತೆಯಾಗಿರೋ ಹಿನ್ನೆಲೆಯಲ್ಲಿ ಭಟ್ಕಳ ಮೂಲದ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಐಸೋಲೇಶನ್ ನಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿತ್ತು. ಅಲ್ಲದೇ ತದನಂತರದಲ್ಲಿ ದುಬೈನಿಂದ ಬಂದಿದ್ದ ಕೇರಳದ ಕಾಸರಗೋಡು ಮೂಲದ ಮೂವರು ಇದೀಗ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇತ್ತೀಚಿಗೆ ನಾಲ್ವರನ್ನೂ ಕೊರೊನಾ ತಪಾಸಣೆಗೆ ಒಳಪಡಿಸಲಾಗಿದ್ದು, ಕೊರೊನಾ ವೈರಸ್ ಸೋಂಕು ಇಲ್ಲದಿರುವುದು ದೃಢಪಟ್ಟಿತ್ತು. ಹೀಗಾಗಿ ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸುಮಾರು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿಯೇ ಕಡ್ಡಾಯವಾಗಿ ಇರುವಂತೆಯೂ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರೋ ಬೆನ್ನಲ್ಲೇ ಜಿಲ್ಲೆಯ ಪ್ರಥಮ ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಮೂವರು ಗುಣಮುಖರಾಗಿರುವುದು ಜಿಲ್ಲೆಯ ಜನತೆಗೆ ಕೊಂಚ ನೆಮ್ಮದಿಯನ್ನು ನೀಡಿದೆ.

Leave A Reply

Your email address will not be published.