ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಎಸ್ಕೇಪ್ !

0

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಮಹಾಮಾರಿಯ ಆರ್ಭಟದ ನಡುವಲ್ಲೇ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತನೋರ್ವ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ ಕೊರೊನಾ ಸೋಂಕಿತ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ 11.30ರ ಸುಮಾರಿಗೆ ಕೊರೊನಾ ಸೋಂಕಿತ ಮಾರ್ಷಲ್ ಗಳ ಬಳಿ ತಾನು ಹೋಟೆಲ್ ಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದಾರೆ. ಕೊರೊನಾ ಸೋಂಕಿತ ವಾಣಿ ವಿಲಾಸ ಆಸ್ಪತ್ರೆಯ ಮೂಲಕ ಪರಾರಿಯಾಗಿದ್ದಾನೆ.

ಇದೀಗ ಕೊರೊನಾ ಸೋಂಕಿತನನ್ನು ಹುಡುಕಿಕೊಡುವಂತೆ ಆರೋಗ್ಯಾಧಿಕಾರಿಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ. ಪೊಲೀಸರು ಆಸ್ಪತ್ರೆಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದ್ರೆ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಪರಾರಿಯಾಗಿರುವುದು ವಿಕ್ಟೋರಿಯಾ ಆಸ್ಪತ್ರೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ.

Leave A Reply

Your email address will not be published.