ಮಹಿಳೆಗೆ ಕೊರೊನಾ ಸೋಂಕು : ಶಿರಿಯಾರ-ಕಾಜ್ರಳ್ಳಿಯಲ್ಲಿ ಸೀಲ್ ಡೌನ್

0

ಬ್ರಹ್ಮಾವರ : ಮಹಿಳೆಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಕಾಜ್ರಳ್ಳಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆಯಲ್ಲಿ ಮಹಿಳೆಯನ್ನು ಕೊರೊನಾ ತಪಾಸಣೆಗೆ ಒಳಪಡಿಸಿದಾಗ ಪಾಸಿಟಿವ್ ವರದಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ಕೊರೊನಾ ಸೋಂಕಿತ ಮಹಿಳೆಯ ಮನೆಯನ್ನು ಕೋಟದ ಕಂದಾಯ ನಿರೀಕ್ಷಕರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ.

Leave A Reply

Your email address will not be published.