ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಇಂದು ಒಂದೇ ದಿನ 22 ಮಂದಿಗೆ ಕೊರೊನಾ ಸೋಂಕು ಇರುವುದುರ ದೃಢಪಟ್ಟಿದ್ದು, ಮಂಗಳೂರು ಬೋಳೂರಿನ ಮಹಿಳೆಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಮಂಗಳೂರು ನಗರದ ಬೋಳೂರಿನಲ್ಲಿ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೋಳೂರಿನ 58 ವರ್ಷದ ಮಹಿಳೆಯ ಗಂಟಲಿನ ದ್ರವವನ್ನು ತಪಾಸಣೆಗೆ ಕಳುಹಿಸಲಾಗಿದ್ದು, ಇದೀಗ ವರದಿಯಲ್ಲಿ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಮೂಲಕ ಮಂಗಳೂರು ನಗರದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ 3ಕ್ಕೆ ಏರಿಕೆಯಾಗಿದೆ. ಹೀಗಾಗಿ ಬೋಳೂರನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಳಗಾವಿಯಲ್ಲಿ 14, ಬೆಂಗಳೂರು 3, ವಿಜಯಪುರ 2, ದಾವಣಗೆರೆ, ದಕ್ಷಿಣ ಕನ್ನಡ ಹಾಗೂ ತುಮಕೂರಿನಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ.