ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ನಿತ್ಯವೂ ಹೊಸ ದಾಖಲೆಗಳನ್ನೇ ಬರೆಯುತ್ತಿದೆ. ಕಳೆದೆರಡು ದಿನಗಳಿಂದಲೂ ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 9 ಸಾವಿರದ ಗಡಿದಾಟುತ್ತಿದೆ.

ಇದೇ ಮೊದಲ ಬಾರಿಗೆ 9,860 ಜನರಲ್ಲಿ ಕೊರೊನಾ ಕಾಣಿಸಿಕೊಳ್ಳುವ ಮೂಲಕ ಎಲ್ಲಾ ದಾಖಲೆಯನ್ನೂ ಬದಿಗೊತ್ತಿದೆ.

ಬೆಂಗಳೂರಿನಲ್ಲಿ 3,420 ಜನರಲ್ಲಿ ಸೋಂಕು ಕಂಡು ಬಂದಿದೆ ಹಾಗೂ ಒಟ್ಟು ಸೋಂಕಿತರ ಸಂಖ್ಯೆ 1,35,512ಕ್ಕೆ ತಲುಪಿದೆ. ಒಟ್ಟು 2,383 ಜನರು ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗುಣಮುಖರಾದವರ ಸಂಖ್ಯೆ 93,563 ಕ್ಕೆ ಏರಿಕೆಯಾಗಿದೆ.

ರಾಜಧಾನಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 39,911ಕ್ಕೆ ಏರಿಕೆಯಾಗಿದೆ. ರಾಜ್ಯದ್ಲಲಿ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೆ ಏರಿಕೆಯಾಗಿದ್ದು ಸಕ್ರೀಯ ಪ್ರಕರಣಗಳ ಸಂಖ್ಯೆ 94,459ರಷ್ಟಿದೆ.

ಕೇವಲ ಕೊರೊನಾ ಸೋಂಕಿತರ ಸಂಖ್ಯೆ ಮಾತ್ರವಲ್ಲ ಮೃತರ ಸಂಖ್ಯೆ ಕೂಡ ಶತಕ ದಾಟುತ್ತಲೇ ಇದ್ದು, ಇಂದು ಕೂಡ 113 ಜನರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 5,950 ಆಗಿದೆ. ಒಟ್ಟು 751 ಜನರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.