ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ : ರಾಜ್ಯದಲ್ಲಿಂದು ಒಂದೇ ಒಂದು ಕೊರೊನಾ ಪಾಸಿಟಿವ್

0

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದೂ ಕೂಡ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ನಿವಾಸಿಯಾಗಿರುವ 47 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಎಪ್ರಿಲ್ 21 ರಂದು ಮೃತಪಟ್ಟಿರುವ ವೃದ್ದೆಯ ಸಂಪರ್ಕದಿಂದ ಸೋಂಕು ಹರಡಿದೆ. ವೃದ್ದೆ ಹಾಗೂ ಆಕೆಯ ಸೊಸೆ ಕೊರೊನಾದಿಂದ ಮೃತಪಟ್ಟಿದ್ದಾರೆ.

ವೃದ್ದೆ ಕೊರೊನಾಕ್ಕೆ ಬಲಿಯಾಗುತ್ತಲೇ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯನ್ನೇ ಸೀಲ್ ಡೌನ್ ಮಾಡಲಾಗಿತ್ತು. ಅಲ್ಲದೇ ಆಸ್ಪತ್ರೆಯ ಸುಮಾರು 20 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಇದೀಗ ಮಹಿಳೆಯ ಕೊರೊನಾ ತಪಾಸಣಾ ವರದಿಯಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

ಮಹಿಳೆಗೆ ಕೊರೊನಾ ಪಾಸಿಟಿವ್ ದೃಢಪಡುತ್ತಿದ್ದಂತೆಯೇ ನೆರಿಕೊಂಬು ಪ್ರದೇಶವನ್ನೇ ಸೀಲ್ ಡೌನ್ ಮಾಡಲಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು ಕೇವಲ ಒಂದೇ ಒಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.