ಉಡುಪಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು ವಿವಿಧ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿರುವವರ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿದೆ. ಕೊರೊನಾ ತಪಾಸಣಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸಿದ್ರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆಯನ್ನು ನೀಡಿದ್ದಾರೆ.

ಉಡುಪಿ ಜಿಲ್ಲೆಗೆ ಆಗಮಿಸುತ್ತಿರುವ ಹಲವರು ಖಾಸಗಿ ಲ್ಯಾಬ್ ಕೊರೊನಾ ಪರಿಕ್ಷೆಗೆ ಒಳಪಡುತ್ತಿದ್ದಾರೆ. ಆದರೆ ವರದಿಯ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದು, ಜಿಲ್ಲೆಗೆ ಆಗಮಿಸಿದ ನಂತರ ಕೊರೊನಾ ಪಾಸಿಟಿವ್ ಬರುತ್ತಿದೆ.

ಹೀಗಾಗಿ ಹೊರರಾಜ್ಯದಿಂದ ಬರುವ ವ್ಯಕ್ತಿಗಳು ತಮ್ಮ ಕೋವಿಡ್ 19 ಪರೀಕ್ಷಾ ವರದಿ ಬಂದ ನಂತರವೇ ಜಿಲ್ಲೆಗೆ ಬರಬೇಕು, ಖಾಸಗಿ ಲ್ಯಾಬ್ ಗಳೂ ಸಹ ಅಂತಹ ವ್ಯಕ್ತಿಗಳ ವರದಿಯನು ಸಂಬಂದಪಟ್ಟ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದಿದ್ದಾರೆ.