ಕೊರೊನಾಕ್ಕೆ ಮಹಿಳೆ ಬಲಿ : ಬಂಟ್ವಾಳದ ಕೆಳಪೇಟೆ ಸಂಪೂರ್ಣ ಸೀಲ್ ಡೌನ್

0

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕು ಮೊದಲ ಬಲಿ ಪಡೆಯುತ್ತಿದ್ದಂತೆಯೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಮಹಿಳೆ ವಾಸವಿದ್ದ ಬಂಟ್ವಾಳದ ಕೆಳಪೇಟೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದ್ದು, ಮಹಿಳೆಯ ಪತಿ, ಮಗ ಹಾಗೂ ಅತ್ತೆಯ ಆರೋಗ್ಯ ತಪಾಸಣೆ ನಡೆಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ 50 ವರ್ಷದ ಪ್ರಾಯದ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 50 ವರ್ಷ ಪ್ರಾಯದ ಮಹಿಳೆ ಮಹಾಮಾರಿಗೆ ಬಲಿಯಾಗುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಬಂಟ್ವಾಳ ತಾಲೂಕಿನಾದ್ಯಂತ ಬಾರೀ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಬಂಟ್ವಾಳದ ಕೆಳಪೇಟೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ಸೋಂಕಿಗೆ ಬಲಿಯಾದ ಮಹಿಳೆಯ ಅತ್ತೆಯ ಸ್ಥಿತಿಯೂ ಗಂಭೀರವಾಗಿದ್ದು, ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಕೊರೊನಾಕ್ಕೆ ಬಲಿಯಾಗಿರೊ ಮಹಿಳೆಯ ಮಗ ಮಾರ್ಚ್ 16 ರಂದು ದುಬೈನಿಂದ ತನ್ನ ಮನೆಗೆ ಆಗಮಿಸಿದ್ದ, ಕೊರೊನಾಕ್ಕೆ ಮಹಿಳೆಗೆ ಬಲಿಯಾಗುತ್ತಲೇ ಮಹಿಳೆಯ ಮಗ ಹಾಗೂ ಪತಿಯನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಜಿಲ್ಲಾಡಳಿತ ಇದೀಗ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಬಂಟ್ವಾಳ ಕೆಳಪೇಟೆಯಲ್ಲಿ ಯಾರೂ ಕೂಡ ಮನೆಯಿಂದ ಹೊರಗೆ ಬರಬೇಡಿ ಅಂತಾ ಪೊಲೀಸರು ಜೀಪಿನಲ್ಲಿ ಅನೌನ್ಸ್ ಮಾಡುತ್ತಿದ್ದಾರೆ. ಅಲ್ಲದೇ ಲಾಕ್ ಡೌನ್ ಆದೇಶವನ್ನು ಇನ್ನಷ್ಟು ಕಠಿಣ ಮಾಡೋ ಚಿಂತನೆಯಲ್ಲಿದೆ ಜಿಲ್ಲಾಡಳಿತ

Leave A Reply

Your email address will not be published.