- Advertisement -
ಉಡುಪಿ : ಕೊರೊನಾ ಭೀತಿಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪೂರು ನಿವಾಸಿಯಾಗಿರುವ ಗೋಪಾಲಕೃಷ್ಣ ಮಡಿವಾಳ (56 ವರ್ಷ) ಎಂಬವರೇ ಸಾವನ್ನಪ್ಪಿರುವ ದುರ್ದೈವಿ. ಕೊರೊನಾ ಭೀತಿಯಿಂದಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಇರಲಿಲ್ಲ ಎಂದು ಸಂಬಂಧಿಕರು ತಿಳಿಸಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.