ಕೊರೊನಾ ಪೀಡಿತ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಜಾರಿ

0

ಚೆನ್ನೈ : ಕೊರೊನಾ ವೈರಸ್ ಸೋಂಕಿಗೆ ತಮಿಳುನಾಡು ಬೆಚ್ಚಿಬಿದ್ದಿದೆ. ತಮಿಳುನಾಡು ಸರಕಾರ ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ನಾಲ್ಕು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಆದೇಶ ಜಾರಿ ಮಾಡಿದೆ.

ತಮಿಳುನಾಡಿನಲ್ಲಿ ಒಟ್ಟು 42,687 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 397 ಮಂದಿ ಸಾವನ್ನಪ್ಪಿದ್ದಾರೆ. ಅದ್ರಲ್ಲೂ ಅತೀ ಹೆಚ್ಚು ಪ್ರಮಾಣದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಚೆನ್ನೈ, ತಿರುವಳ್ಳುವರ್, ಚೆಂಗಲ್ ಪೇಟೆ ಹಾಗೂ ಕಾಂಚೀಪುರಂ ಜಿಲ್ಲೆಗಳಲ್ಲಿ ಜೂನ್ 19ರಿಂದ ಜೂನ್ 30ರ ವರೆಗೆ ಕಟ್ಟುನಿಟ್ಟಿನ ಲಾಕ್ ಡೌನ್ ಆದೇಶವನ್ನು ಜಾರಿ ಮಾಡಲಾಗಿದೆ.

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಮಾತ್ರವೇ ಅವಕಾಶ ಕಲ್ಪಿಸಲಾಗಿದೆ. ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಆದೇಶ ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ತಮಿಳುನಾಡು ಸರಕಾರ ಸೂಚನೆಯನ್ನು ನೀಡಿದೆ.

Leave A Reply

Your email address will not be published.