ಬೆಂಗಳೂರು : ಕೊರೊನಾ ಸೋಂಕಿತರ ನಾಪತ್ತೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೊರೊನಾ ತಪಾಸಣೆಗೆ ಆಧಾರ್ ಕಾರ್ಡ್ ಅಥವಾ ಓಟರ್ ಐಡಿ ಹಾಜರು ಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಕೊರೊನಾ ತಪಾಸಣೆಯ ವೇಳೆಯಲ್ಲಿ ಜನರು ಸುಳ್ಳು ಮಾಹಿತಿಯನ್ನು ನೀಡುತ್ತಿರುವುದು ಒಂದೆಡೆಯಾದ್ರೆ, ಇನ್ನೊಂದೆಡೆರಾಜ್ಯದಲ್ಲಿ ಕೊರೊನಾ ತಪಾಸಣೆಯನ್ನು ನಡೆಸಿದ ಸುಮಾರು 4,500 ಮಂದಿ ಸೋಂಕಿತರು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಆಧಾರ್ ಕಾರ್ಡ್ ಅಥವಾ ಓಟರ್ ಐಡಿಯನ್ನು ಪಡೆದು ತಪ್ಪು ಮಾಹಿತಿ ನೀಡುವುದನ್ನು ತಪ್ಪಿಸಬಹುದಾಗಿದೆ. ಹೀಗಾಗಿಯೇ ಇನ್ಮುಂದೆ ಕೊರೊನಾ ತಪಾಸಣೆ ನಡೆಸುವ ವೇಳೆಯಲ್ಲಿ ಕಡ್ಡಾಯವಾಗಿ ಆಧಾರ್ ಕಾರ್ಡ್ ಪಡೆಯಲೇ ಬೇಕು. ಮಾತ್ರವಲ್ಲ ವಿಳಾಸದ ದಾಖಲೆಗಳೊಂದಿಗೆ ಓಟಿಪಿ ಪಡೆಯುವಂತೆಯೂ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.