ಕೊರೊನಾ ಎಫೆಕ್ಟ್ : ಮಾರ್ಚ್ 31ರ ವರೆಗೆ ರೈಲು, ಮೆಟ್ರೋ, ಬಸ್ ಬಂದ್

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದೇಶದಾದ್ಯಂತ ಮೆಟ್ರೋ, ರೈಲು ಸಂಚಾರವನ್ನು ಸ್ಥಗಿತಗೊಳಿಸಿದ್ರೆ, ಕರ್ನಾಟಕ ಸರಕಾರ ನಾಳೆಯಿಂದ ಹೊರ ರಾಜ್ಯಗಳಿಗೆ ತೆರಳೋ ಬಸ್ ಸಂಚಾರವನ್ನೂ ಬಂದ್ ಮಾಡಿ ಆದೇಶ ಹೊರಡಿಸಿದೆ.

ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಅಂತರಾಷ್ಟ್ರೀಯ ವಿಮಾನ ಸೇವೆಗಳಿಗೆ ನಿರ್ಬಂಧ ಹೇರಿರೊ ಕೇಂದ್ರ ಸರಕಾ ಇದೀಗ ಮೆಟ್ರೋ ಹಾಗೂ ರೈಲು ಸಂಚಾರವನ್ನು ಸ್ಥಗಿತಗೊಳಿಸಲಿದೆ. ಭಾರತೀಯ ರೈಲ್ವೆ ಇಲಾಖೆ ದೇಶದಲ್ಲಿ ಸಂಚರಿಸೋ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದೆ. ಪ್ರಯಾಣಿಕರ ರೈಲುಗಳು ಮಾರ್ಚ್ 31ರ ವರೆಗೆ ಪ್ರಯಾಣಿಕರ ರೈಲು ಸಂಚಾರ ಮಾಡೋದಿಲ್ಲ, ಆದರೆ ಗೂಡ್ಸ್ ರೈಲುಗಳು ಮಾತ್ರ ಎಂದಿನಂತೆಯೇ ಸಂಚರಿಸಲಿವೆ.

ಕೇವಲ ರೈಲು ಸಂಚಾರ ಮಾತ್ರವಲ್ಲ ಮೆಟ್ರೋ ಸೇವೆಗಳನ್ನು ಕೇಂದ್ರ ಸರಕಾರ ರದ್ದುಗೊಳಿಸಿದೆ. ಮಹಾನಗರಗಳಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಜನರು ಮೆಟ್ರೋ ಸೇವೆಗಳನ್ನು ಅವಲಂಭಿಸಿದ್ದಾರೆ. ಹೀಗಾಗಿ ಕೊರೊನಾ ಸೋಂಕು ಮೆಟ್ರೋ ರೈಲುಗಳ ಮೂಲಕ ಹರಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನಾಳೆಯಿಂದಲೇ ಮೆಟ್ರೋ ರೈಲು ಸೇವೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದೆ. ಮಾರ್ಚ್ 31ರ ವರೆಗ ದೇಶದ ಯಾವುದೇ ಮಹಾನಗರಗಳಲ್ಲಿ ಮೆಟ್ರೋ ರೈಲು ಸೇವೆ ಲಭ್ಯವಾಗೋದಿಲ್ಲ.

ಬಸ್ ಸಂಚಾರ ಸ್ತಬ್ದ
ಕರ್ನಾಟಕ ರಾಜ್ಯದಲ್ಲಿಯೂ ಕೊರೊನಾ ತೀವ್ರತೆ ಹೆಚ್ಚುತ್ತಿರೋ ಬೆನ್ನಲ್ಲೇ ರಾಜ್ಯ ಸರಕಾರ ಹೊರ ರಾಜ್ಯಗಳಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾ, ಮಹಾರಾಷ್ಟ್ರ ರಾಜ್ಯಗಳಿಗೆ ಯಾವುದೇ ಬಸ್ ಸಂಚಾರ ಮಾಡುವಂತಿಲ್ಲ. ಮಾತ್ರವಲ್ಲ ನೆರೆಯ ರಾಜ್ಯಗಳಿಂದಲೂ ಕರ್ನಾಟಕಕ್ಕೆ ಬಸ್ ಸಂಚಾರ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.

Leave A Reply

Your email address will not be published.