ಉಡುಪಿ : ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಇದೀಗ ಕೊರೊನಾ ಮಹಾಮಾರಿ ಒಕ್ಕರಿಸಿದೆ. ವಿದೇಶಗಳಿಂದ ಬಂದಿದ್ದ 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಮೇ 12ರಂದು ಉಡುಪಿ ಜಿಲ್ಲೆಗೆ ಆಗಮಿಸಿದ್ದ 49 ಮಂದಿಯ ಪೈಕಿ 5 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಮಗು ಕೂಡ ವಿದೇಶಿಂದಲೇ ಆಗಮಿಸಿದ್ದು, ಮಗುವಿನ ತಂದೆ ತಾಯಿಗೆ ಈಗಾಗಲೇ ಕೊರೊನಾ ಸೋಂಕು ದೃಢಪಟ್ಟಿತ್ತು. ಆದ್ರೀಗ ಸಂಜೆಯ ವರದಿಯಲ್ಲಿ ಮಗುವಿಗೂ ಕೂಡ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಈ ಮೂಲಕ ಉಡುಪಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ6ಕ್ಕೆ ಏರಿಕೆಯಾಗಿದೆ. ಗ್ರೀನ್ ಝೋನ್ ವ್ಯಾಪ್ತಿಗೆ ಸೇರ್ಪಡೆಯಾಗಿರುವ ಉಡುಪಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆವರು ಜಿಲ್ಲೆಯ ಜನತೆ ಆತಂಕಕ್ಕೆ ಒಳಗಾಗುವುದು ಬೇಡ. ವಿದೇಶದಿಂದ ಬಂದವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದಿದ್ದಾರೆ.