ಉಡುಪಿಯಲ್ಲಿಂದು 62 ಮಂದಿಗೆ ಕೊರೊನಾ ಸೋಂಕು

0

ಉಡುಪಿ : ಕೃಷ್ಣನನಗರಿ ಉಡುಪಿಯಲ್ಲಿಂದು ಕೂಡ ಕೊರೊನಾ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿಂದು ಬರೊಬ್ಬರಿ 62 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾ ಪೀಡಿತರ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ನಿನ್ನೆ ಬರೊಬ್ಬರಿ 150 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಕೊರೊನಾ ಇಂದು ಕೂಡ ತನ್ನ ಅಬ್ಬರವನ್ನು ಮುಂದುವರಿಸಿದೆ. ಇಂದು ಜಿಲ್ಲೆಯಲ್ಲಿ 61 ಮಂದಿಗೆ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 472ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇರುವರೆಗೆ 84 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, 386 ಮಂದಿ ಕೊರೊನಾ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.