ಉಡುಪಿಯಲ್ಲಿ ಸಾವಿರದಾಟಿದ ಸೋಂಕಿತ ಸಂಖ್ಯೆ : ರಾಜ್ಯದಲ್ಲಿಂದು 308 ಮಂದಿಗೆ ಕೊರೊನಾ ಸೋಂಕು

0

ಬೆಂಗಳೂರು : ಡೆಡ್ಲಿ ಕೊರೊನಾ ವೈರಸ್ ಮಹಾಮಾರಿಯ ಆರ್ಭಟ ಹೆಚ್ಚುತ್ತಿದ್ದು, ಕಲಬುರಗಿ, ಯಾದಗಿರಿ, ಬೀದರ್, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಕೊರೊನಾ ಶಾಕ್ ಕೊಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೊಬ್ಬರಿ 308 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6824ಕ್ಕೆ ಏರಿಕೆಯಾಗಿದ್ರೆ, ಉಡುಪಿ ಜಿಲ್ಲೆಯೊಂದರಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆ 1005ಕ್ಕೆ ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಜೋರಾಗಿದೆ. ಜಿಲ್ಲೆಯಲ್ಲಿಂದು ಬರೋಬ್ಬರಿ 67 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ತುತ್ತಾದವರ ಸಂಖ್ಯೆ 883ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಯಾದಗಿರಿ ಜಿಲ್ಲೆಯಲ್ಲಿ ಇಂದೂ ಕೂಡ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇಂದು 52 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 787ಕ್ಕೆ ಏರಿದೆ. ಬೀದರ್ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇಂದೂ ಕೂಡ 42 ಮಂದಿಗೆ ಸೋಂಕು ಪತ್ತೆಯಾಗಿದೆ.

ಕಳೆದ ಮೂರು ದಿನಗಳಿಂದಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಆರ್ಭಟಿಸುತ್ತಿದೆ. ಇಂದು ಬೆಂಗಳೂರಲ್ಲಿ 31 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 648ಕ್ಕೆ ಏರಿಕೆಯಾಗಿದೆ. ಇಷ್ಟು ದಿನ ತಣ್ಣಗಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 30 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 20, ಉಡುಪಿ ಜಿಲ್ಲೆಯಲ್ಲಿ 14, ಹಾಸನ 11, ಬಳ್ಳಾರಿ 11, ವಿಜಯಪುರ 6, ರಾಯಚೂರು 5, ಉತ್ತರ ಕನ್ನಡ 5, ಕೋಲಾರ 4, ದಾವಣಗೆರೆ 3, ಮಂಡ್ಯ 2, ಹಾವೇರಿ 2 ಹಾಗೂ ಮೈಸೂರು, ಬಾಗಲಕೋಟೆ ಹಾಗೂ ರಾಮನಗರ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಇದುವರೆಗೆ 6824 ಮಂದಿಗೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಇದುವರೆಗೆ 3648 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 3,092 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಕೊರೊನಾ ಮಹಾಮಾರಿಯಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದುವರೆಗೆ ರಾಜ್ಯದಲ್ಲಿ 81 ಮಂದಿಯನ್ನು ಡೆಡ್ಲಿ ಮಹಾಮಾರಿ ಬಲಿ ಪಡೆದಿದೆ.

Leave A Reply

Your email address will not be published.