ದಕ್ಷಿಣ ಕನ್ನಡದಲ್ಲಿ ಮುಂಬೈನಿಂದ ಬಂದಿದ್ದ ಯುವತಿಗೆ ಕೊರೊನಾ ಸೋಂಕು : ಸೇಫ್ ಝೋನ್ ಬೆಳ್ತಂಗಡಿಗೂ ಒಕ್ಕರಿಸಿತು ಮಹಾಮಾರಿ

0

ಬೆಳ್ತಂಗಡಿ : ಕೊರೊನಾ ಸೋಂಕು ದಕ್ಷಿಣ ಕನ್ನಡವನ್ನು ಸದ್ಯಕ್ಕೆ ಬಿಡುವ ಲಕ್ಷಣ ಕಾಣಿಸುತ್ತಿಲ್ಲ. ಇಂದೂ ಕೂಡ ಮತ್ತೊಂದು ಕೊರೊನಾ ಸೋಂಕು ದೃಢಪಟ್ಟಿದೆ. ಮುಂಬೈನಿಂದ ಆಗಮಿಸಿದ್ದ 28 ವರ್ಷ ಪ್ರಾಯದ ಬೆಳ್ತಂಗಡಿ ತಾಲೂಕಿನ ಅರಂಬೋಡಿಯ ಯುವತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮೇ 18ರಂದು ಮುಂಬೈನಿಂದ ಬೆಳ್ತಂಗಡಿಗೆ ಆಗಮಿಸಿದ್ದ ಯುವತಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಕೇಂದ್ರದಲ್ಲಿದ್ದವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದೀಗ ಯುವತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೀಗಾಗಿ ಯುವತಿಯನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಯುವತಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮೇಲೆ ಜಿಲ್ಲಾ ಆರೋಗ್ಯ ಇಲಾಖೆ ನಿಗಾ ಇರಿಸಿದೆ.

Leave A Reply

Your email address will not be published.