ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ರಣಕೇಕೆ ಮುಂದುವರಿದಿದೆ. ದೇಶದಲ್ಲಿ ಕಳೆದ 4 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 79ಸಾವಿರಕ್ಕೂ ಅಧಿಕ ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 1ಲಕ್ಷದ ಗಡಿದಾಟಿದೆ.

ಕೇಂದ್ರ ಆರೋಗ್ಯ ಇಲಾಖೆ ಪ್ರಕಟಿಸಿರುವ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಟ್ಟು 1,069 ಮಂದಿ ಬಲಿಯಾಗಿದ್ದು, ಸಾವಿನಪ್ಪಿರುವವರ ಸಂಖ್ಯೆ 1,00,842ಕ್ಕೆ ಏರಿಕೆಯಾಗಿದೆ. ಈ ಮೂಲಕ ಭಾರತವು ಅಮೆರಿಕಾ ಮತ್ತು ಬ್ರೆಜಿಲ್ ಬಳಿಕ ಕೊರೋನಾಕ್ಕೆ 1 ಲಕ್ಷಕ್ಕೂ ಅಧಿಕ ಮಂದಿ ಸಾವಿಗೀಡಾದ ವಿಶ್ವದ 3ನೇ ರಾಷ್ಟ್ರವಾಗಿದೆ.

ದೇಶದಾದ್ಯಂತ ಒಟ್ಟು 7.78 ಕೋಟಿ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,32,675 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದುವರೆಗೆ 79,476 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ.

ಇನ್ನು 64,73,545 ಮಂದಿ ಸೋಂಕಿತರ ಪೈಕಿ 54,27,707 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನು 9,44,996 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರವರೆಗೂ 7,78,50,403 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.