ರಾಜ್ಯದಲ್ಲಿ ಕೊರೋನಾ ಬ್ಲಾಸ್ಟ್ : 14,738 ಮಂದಿಗೆ ಸೋಂಕು : ತತ್ತರಿಸಿದ ಸಿಲಿಕಾನ್ ಸಿಟಿ..!!!

ಬೆಂಗಳೂರು : ರಾಜ್ಯದಲ್ಲಿಂದು ಕೊರೋನಾ ಮಹಾ ಸ್ಪೋಟ ಸಂಭವಿಸಿದೆ. ಕೇವಲ ಒಂದೇ ದಿನದಲ್ಲಿ ಬರೋಬ್ಬರಿ 14,738 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರದ ಗಡಿದಾಟಿದೆ.

ಬೆಂಗಳೂರಲ್ಲಿ ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಿದ್ದು, ಕೊರೊನಾ ಸೋಂಕು ಆತಂಕವನ್ನು ಮೂಡಿಸಿದೆ.ಕಳೆದ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 10,497 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ 14,738 ಮಂದಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗು ತ್ತಿದ್ದು,  96,561 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕೊರೊನಾ ಹೆಮ್ಮಾರಿಗೆ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ 30 ಮಂದಿ ಸಾವನ್ನಪ್ಪಿದ್ದರೆ, ಬೀದರ್ 2, ಧಾರವಾಡ 3, ಹಾಸನ 4, ಕಲಬುರಗಿ 1, ಕೋಲಾರ 1,, ಮೈಸೂರಿ 5,  ರಾಮನಗರ 1, ಶಿವಮೊಗ್ಗ 1, ತುಮಕೂರು 2, ಉತ್ತರ ಕನ್ನಡ 2, ಮತ್ತು ವಿಜಯಪುರ ದಲ್ಲಿ ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿಂದು 66 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 13,112 ಮಂದಿಯನ್ನು ಕೊರೊನಾ ಹೆಮ್ಮಾರಿ ಬಲಿಪಡೆದಿದೆ.

Comments are closed.