2,627 ಮಂದಿಗೆ ಸೋಂಕು, 71 ಮಂದಿ ಸಾವು : ಬೆಂಗಳೂರು, ದಕ್ಷಿಣ ಕನ್ನಡದಲ್ಲಿ ಕೊರೊನಾತಂಕ

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಆತಂಕವನ್ನು ತಂದೊಡ್ಡುತ್ತಿದೆ. ಇಂದು ಕೂಡ ರಾಜ್ಯದಲ್ಲಿ ಬರೋಬ್ಬರಿ 2,627 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 38,8343ಕ್ಕೆ ಏರಿಕೆಯಾಗಿದೆ. ಒಂದೇ ದಿನ 71 ಮಂದಿಯನ್ನು ಸೋಂಕು ಬಲಿ ಪಡೆದಿದ್ದು, ಮಹಾಮಾರಿ ಆತಂಕವನ್ನು ಮೂಡಿಸುತ್ತಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ವೈರಸ್ ಸೋಂಕಿಗೆ ಬೆಚ್ಚಿಬಿದ್ದಿದೆ. ಇಂದು 1,525 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 18,387ಕ್ಕೆ ಏರಿಕೆಯಾಗಿದ್ದು, 45 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 4,045 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, 14,067 ಮಂದಿ ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಲ್ಲಿಯೇ 274 ಮಂದಿಯನ್ನು ಕೊರೊನಾ ಬಲಿ ಪಡೆದಿದೆ.

ಇನ್ನು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯನ್ನು ಕಾಣುತ್ತಿದ್ದು, ಇಂದು 196 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,222ಕ್ಕೆ ಏರಿಕೆಯನ್ನು ಕಂಡಿದೆ. ಇಂದು ಜಿಲ್ಲೆಯಲ್ಲಿ 5 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಧಾರವಾಡ ಜಿಲ್ಲೆಯಲ್ಲಿ 129 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದ್ರೆ, ಕೊರೊನಾ ಸೋಂಕಿನಿಂದ ನಡುಗಿರುವ ಯಾದಗಿರಿ ಜಿಲ್ಲೆಯಲ್ಲಿ ಇಂದೂ ಕೂಡ 120 ಮಂದಿಗೆ ಸೋಂಕು ದೃಢಪಟ್ಟಿದೆ. ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿರುವ ಕಲಬುರಗಿ ಜಿಲ್ಲೆಯಲ್ಲಿ 79, ಬಳ್ಳಾರಿಯಲ್ಲಿ 63 ಹಾಗೂ ಬೀದರ್ ಜಿಲ್ಲೆಯಲ್ಲಿ 62 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Leave A Reply

Your email address will not be published.