ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಬಿದ್ದಿಲ್ಲ. ಇಂದೂ ಕೂಡ ರಾಜ್ಯದಲ್ಲಿ ಬರೋಬ್ಬರಿ 63 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದ ಹಾಸನ ಜಿಲ್ಲೆಗೆ ಕೊರೊನಾ ಬಿಗ್ ಶಾಕ್ ಕೊಟ್ಟಿದೆ. ಇಂದು ಒಂದೇ ದಿನ ಹಾಸನ ಜಿಲ್ಲೆಯಲ್ಲಿ 21 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಮಲೆನಾಡಿನ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಬೀದರ್ ಜಿಲ್ಲೆಯಲ್ಲಿ 10, ಮಂಡ್ಯದಲ್ಲಿ 8, ಕಲಬುರಗಿ 7, ಉಡುಪಿ 6, ಬೆಂಗಳೂರು 4, ತುಮಕೂರು 4, ದಕ್ಷಿಣಕನ್ನಡ 1, ಯಾದಗಿರಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮುಂಬೈನಿಂದ ರಾಜ್ಯಕ್ಕೆ ಆಗಮಿಸಿದ್ದ ಪ್ರಯಾಣಿಕರಲ್ಲೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಗ್ರೀನ್ ಝೋನ್ ವ್ಯಾಪ್ತಿಯಲ್ಲಿರುವ ಉಡುಪಿ ಜಿಲ್ಲೆಯಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಕಳೆದೊಂದು ವಾರದಿಂದಲೂ ಹತ್ತಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಮತ್ತೆ 6 ಮಂದಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಆತಂಕ ಶುರುವಾಗಿದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಮತ್ತೊಂದು ಕೊರೊನಾ ಸೊಂಕು ಪ್ರಕರಣ ದಾಖಲಾಗಿದೆ.