ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸುನಾಮಿ ! ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದ ಕಲಬುರಗಿ

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಕರಾವಳಿಯಲ್ಲಿ ಮತ್ತೆ ಆರ್ಭಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 79 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಅಲ್ಲದೇ ರಾಜ್ಯಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿಂದು 317 ಮಂದಿಗೆ ಕೊರೊನಾ ಸೋಂಕಿರುವುದು ಖಚಿತವಾಗಿದ್ದು ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ.

ಕಳೆದ ಹಲವು ದಿನಗಳಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕಡಿಮೆಯಾಗಿತ್ತು. ಆದ್ರೆ ಇಂದು ಒಂದೇ ದಿನ 79 ಮಂದಿಗೆ ಸೋಂಕು ದೃಢಪಟ್ಟಿದೆ. ವಿದೇಶದಿಂದ ಬಂದಿದ್ದವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 370ಕ್ಕೆ ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆಗೆ ಕೊರೊನಾ ಸೋಂಕು ಅಪಾಯವನ್ನು ತಂದೊಡ್ಡುತ್ತಿದೆ. ಕಲಬುರಗಿಯಲ್ಲಿಂದು ಬರೋಬ್ಬರಿ 63 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 1007ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಎರಡನೇ ಅತೀ ಹೆಚ್ಚು ಸಂಖ್ಯೆಯಲ್ಲಿ ಸೋಂಕಿತರನ್ನು ಹೊಂದಿದ ಜಿಲ್ಲೆಯಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜಿಂದಾಲ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡಿರುವ ಸೋಂಕು ಬಳ್ಳಾರಿಗೆ ಆತಂಕವನ್ನು ತಂದೊಡ್ಡಿದೆ. ಜಿಲ್ಲೆಯಲ್ಲಿಂದು 53 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಬಾರೀ ಏರಿಕೆಯಾಗಿದೆ. ಇಂದು ಒಂದೇ ದಿನ 47 ಮಂದಿಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಈ ಮೂಲಕ 772ಕ್ಕೆ ಏರಿಕೆಯಾಗಿದೆ. ಅಲ್ಲದೇ ಬೆಂಗಳೂರಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದೆ.

ಉಳಿದಂತೆ ಧಾರವಾಡ 8, ಉಡುಪಿ 7, ಶಿವಮೊಗ್ಗ 7, ಯಾದಗಿರಿ 6, ರಾಯಚೂರು 6, ಉತ್ತರ ಕನ್ನಡ 6, ಹಾಸನ 5, ವಿಜಯಪುರ 4, ಮೈಸೂರು 4, ಗದಗ 4, ರಾಮನಗರ 4, ಚಿಕ್ಕಮಗಳೂರು 4, ಕೊಪ್ಪಳ 4, ಬೆಳಗಾವಿ3, ಬೀದರ್ 2 ಹಾಗೂ ತುಮಕೂರು ಜಿಲ್ಲೆಯಲ್ಲಿ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

Leave A Reply

Your email address will not be published.