ದಕ್ಷಿಣ ಕನ್ನಡ 24, ಉಡುಪಿ 29 ಮಂದಿಗೆ ಸೋಂಕು : ಕರುನಾಡಲ್ಲಿ ಕೊರೊನಾ ಮಹಾಸ್ಪೋಟ

0

ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಬೆಳಗ್ಗೆ 75 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಸಂಜೆಯಾಗುತ್ತಲೇ ಕೊರೊನಾ ಪೀಡಿತರ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಅದ್ರಲ್ಲೂ ಕರಾವಳಿಗೆ ಕೊರೊನಾ ಆತಂಕವನ್ನು ತಂದೊಡ್ಡಿದ್ದು, ಉಡುಪಿ ಜಿಲ್ಲೆಯಲ್ಲಿ 29 ಮಂದಿಗೆ ಕೊರೊನಾ ಸೋಂಕು ಆವರಿಸಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲಿಯೇ ಅತೀ ಹೆಚ್ಚು ಕೊರೊನಾ ಪ್ರಕರಣ ದಾಖಲಾಗಿದೆ. ಬೆಳಗ್ಗೆ 27 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ, ಸಂಜೆ ಕೊರೊನಾ ಪೀಡಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 149ಕ್ಕೆ ಏರಿಕೆಯಾಗಿದ.ೆ ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೊರೊನಾ ಆತಂಕವನ್ನು ತಂದೊಡ್ಡಿದೆ. ಜಿಲ್ಲೆಯಲ್ಲಿಂದು ಒಂದೇ ದಿನ ಬರೋಬ್ಬರಿ 24 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಂದು 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಸನ 13, ಬೀದರ್ 12, ಯಾದಗಿರಿ 7, ಚಿತ್ರದುರ್ಗ 6, ಕಲಬುರಗಿ 5, ಹಾವೇರಿ 4, ಚಿಕ್ಕಮಗಳೂರು 3, ವಿಜಯಪುರ 2, ರಾಯಚೂರು ಜಿಲ್ಲೆಯಲ್ಲಿ ಓರ್ವನಿಗೆ ಸೋಂಕು ಪತ್ತೆಯಾಗಿದೆ.

ಬೆಳಗ್ಗೆ 75 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಮತ್ತೆ 40 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2,533ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.